ಅಳದಂಗಡಿ: ನಾರಾವಿಯಿಂದ ಅಳದಂಗಡಿವರೆಗೆ ಕಾಂಗ್ರೆಸ್ ರೋಡ್ ಶೋ ಹಾಗೂ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ
ನಾರಾಯಣಗುರು ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸಿದರು. ಇವರ ಉದ್ದೇಶ ಹಿಂದುಳಿದ ವರ್ಗಗಳ ಕಲ್ಯಾಣ. ಇದೀಗ ಜನಾರ್ದನ ಪೂಜಾರಿ ಅವರ ಶಿಷ್ಯ ಪದ್ಮರಾಜ್ ಆರ್. ಪೂಜಾರಿ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಹಿಂದುಳಿದ ವರ್ಗಗಳ ಧ್ವನಿಯಾಗಿ. ಸಣ್ಣಪುಟ್ಟ
ಸಮುದಾಯಗಳ ಉದ್ಧಾರಕ್ಕಾಗಿ, ಎಲ್ಲಾ ದುರ್ಬಲ ಸಮುದಾಯಗಳನ್ನು ಒಟ್ಟಾಗಿ ಕೊಂಡೊಯ್ಯಲು ಪದ್ಮರಾಜ್ ಗೆಲ್ಲಬೇಕು. ಅವರು ಶಿಕ್ಷಣ, ಆರೋಗ್ಯದ ವಿಚಾರ ಬಿಟ್ಟು ಬೇರೇನನ್ನೂ ಮಾತನಾಡುತ್ತಿಲ್ಲ. ಹಾಗಾಗಿ ಈ ಬಾರಿ ಗೆದ್ದೇ ಗೆಲ್ತೀವಿ ಅನ್ನುವ ಆತ್ಮವಿಶ್ವಾಸದೊಂದಿಗೆ ಕೆಲ್ಸ ಮಾಡಿ ಎಂದರು.ಗ್ಯಾರೆಂಟಿ ಯೋಜನೆಯಿಂದ ಜನರು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ ಎಂದರು.
ತುಳುನಾಡಿನ ದೈವ – ದೇವರುಗಳ ಆಶೀರ್ವಾದದಿಂದ ನಮ್ಮ ಉನ್ನತಿ: ಪದ್ಮರಾಜ್
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ತಾನು ರಾಜಕೀಯಕ್ಕೆ ಬರ್ತೇನೆ, ಲೋಕಸಭಾ ಸದಸ್ಯ ಚುನಾವಣೆಗೆ ಟಿಕೇಟ್ ಪಡೆದುಕೊಳ್ಳುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ತುಳು ನಾಡಿನ ದೈವ – ದೇವರುಗಳ ಆಶೀರ್ವಾದದಿಂದ ನಾವು ಇಂದು ಈ ಮಟ್ಟಕ್ಕೆ ಏರಿದ್ದೇವೆ ಎಂದ ಅವರು, ಉಳಿದ ಹಬ್ಬಗಳಂತೆ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಬೇಕು ಎಂದರು.
ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,ಮಾಜಿ ಸಚಿವ ಗಂಗಾಧರ ಗೌಡ,ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಪ್ರಮುಖರಾದ ರಂಜನ್ ಗೌಡ, ನಾಗೇಶ್ ಗೌಡ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್, ಪ್ರತಿಭಾ ಕುಳಾಯಿ, ಶ್ಯಾಲೆಟ್ ಪಿಂಟೋ, ಶಕುಂತಳಾ ಗಟ್ಟಿ, ಧರ್ಣೇಂದ್ರ ಕುಮಾರ್, ವಂದನಾ ಭಂಡಾರಿ, ಲಕ್ಷ್ಮೀಶ್ ಗಬ್ಬಲಡ್ಕ ಮೊದಲಾದವರು ಉಪಸ್ಥಿತರಿದ್ದರು.