ಕಡಬ: ದಕ್ಷಿಣ ಕನ್ನಡ ಜಿಲ್ಲೆ ಅಭಿವೃದ್ಧಿ ಕಡೆ ಹೆಜ್ಜೆ ಹಾಕಬೇಕಾಗಿದ್ದು, ಇದಕ್ಕಾಗಿ ಮತದಾರರು ಕಾಂಗ್ರೆಸನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ.11ರಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು ಆಲಂಕಾರಿನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದರು. ಈ ಬಾರಿ ದ.ಕ. ಜಿಲ್ಲೆಯಲ್ಲಿ
ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ ಎಂದರು.
ಕಾಂಗ್ರೆಸ್ ಜಿಲ್ಲಾ ಸಮಿತಿ ಉಸ್ತುವಾರಿ ಬಿ.ರಮಾನಾಥ ರೈ, ಸುಳ್ಯ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿ, ಸಂಯೋಜಕರಾದ ಶಕುಂತಳಾ ಶೆಟ್ಟಿ, ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಡಾ. ರಘು ಚುನಾವಣಾ ವೀಕ್ಷಕ ಎನ್. ಜಯಪ್ರಕಾಶ್ ರೈ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ,ಕಡಬ ಉಸ್ತುವಾರಿ ಪಿ.ಪಿ. ವರ್ಗೀಸ್, ಪ್ರಚಾರ ಸಮಿತಿಯ ಎಂ. ವೆಂಕಪ್ಪ ಗೌಡ, ಗೋಪಾಲಕೃಷ್ಣ ಪಡ್ಡಿಲ್ಲಾಯ, ಪ್ರವೀಣ್ ಕೆಡೆಂಜಿ, ಕಡಬ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಯತೀಸ್ ಕುಮಾರ್ ಬಾನಡ್ಕ, ತಾಪಂ ಮಾಜಿ ಸದಸ್ಯ ಫಝಲ್, ಪ್ರಮುಖರಾದ ಕಿರಣ್ ಬುಡ್ಲೆಗುತ್ತು, ಬಾಲಕೃಷ್ಣ ಬಲ್ಲೇರಿ, ಜಯರಾಜ್, ಗಣೇಶ್ ಕೈಕುರೆ, ಸತೀಶ್ ಕುಮಾರ್ ಕೆಡೆಂಜಿ, ಎನ್.ಎಸ್.ಯು.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝೈನು ಆಲಂಕಾರು ಮೊದಲಾದವರು ಉಪಸ್ಥಿತರಿದ್ದರು.
ಸದಾನಂದ ಕುಮಾರ್, ಅಬೂಬಕ್ಕರ್ ನೆಕ್ಕರೆ ಕಾರ್ಯಕ್ರಮ ನಿರೂಪಿಸಿದರು.
ನೆಲ್ಯಾಡಿ, ಕಡಬ ಸೇರಿ ವಿವಿಧ ಕಡೆಗಳಲ್ಲಿ ಪದ್ಮರಾಜ್ ಚುನಾವಣಾ ಪ್ರಚಾರ ಕೈಗೊಂಡರು.