ಸುಳ್ಯ: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಅವರು ಮಾ.30ರಂದು ಸುಳ್ಯದಲ್ಲಿ ಬಿರುಸಿನ ಚುನಾವಣಾ ಪ್ತಚಾರ ಕೈಗೊಂಡರು. ಬೆಳಿಗ್ಗೆ ಸುಳ್ಯಕ್ಕೆ ಆಗಮಿಸಿದ ಅವರು ಸುಳ್ಯ ನಗರದ ವಿವಿಧ ದೇವಸ್ಥಾನ, ದೈವಸ್ಥಾನ, ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಬಳಿಕ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಬಳಿಕ ನಗರ ಪಂಚಾಯತ್ ಆವರಣದ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಕೆ.ವಿ.ಜಿ. ಇಂಜಿನಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಿದ ಅವರು ಸುಳ್ಯ ಬಸ್ ನಿಲ್ದಾಣದಲ್ಲಿ

ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಸುಳ್ಯ ನಗರದಲ್ಲಿ ವಿವಿಧ ಕಡೆ ಮತದಾರರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು. ಬಸ್ ನಿಲ್ದಾಣದ ಬಳಿಯಲ್ಲಿ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಿದರು. ಬಳಿಕ ಬೆಳ್ಳಾರೆಗೆ ತೆರಳಿ ಚುನಾವಣಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಿವಿಧ ಕಡೆ ಸಾರ್ವಜನಿಕರನ್ನು ಭೇಟಿ ಮಾಡಿ ಚುನಾವಣಾ ಪ್ರಚಾರ ಕೈಗೊಂಡರು.
