ಬಂಟ್ವಾಳ: ಅಪಪ್ರಚಾರ ನಡೆಸುವವರಿಗೆ ಉತ್ತರ ನೀಡುವ ಅಗತ್ಯವಿಲ್ಲ. ನಮ್ಮ ಕೆಲಸವೇ ಅವರಿಗೆ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಣಿನಾಲ್ಕೂರು ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸರಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಸಚಿವ
ಬಿ. ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪೀಯೂಷ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸಂಪತ್ ಕುಮಾರ್ ಶೆಟ್ಟಿ, ಸುರೇಶ್ ಪೂಜಾರಿ ಜೋರಾ, ಕಾಂಚಲಾಕ್ಷಿ, ಜಯಂತಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ತುಂಬೆ ಹಾಗೂ ಬೆಳ್ತಂಗಡಿ, ಶಿರ್ಲಾಲು, ಮಡಂತ್ಯಾರು ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮತಯಾಚನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರನ್ನು ಭೇಟಿಯಾಗಿ, ಸಮಾಲೋಚನೆ ನಡೆಸಿದರು.
ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಅಧ್ಯಕ್ಷರುಗಳಾದ ಕೆ.ಎಂ. ನಾಗೇಶ್ ಗೌಡ, ಸತೀಶ್ ಕೆ. ಕಾಶಿಪಟ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಪ್ರಮುಖರಾದ ಧರ್ಣೇಂದ್ರ ಕುಮಾರ್, ಶೇಕರ್ ಕುಕ್ಕೇಡಿ, ಸಚಿನ್ ನೂಜೋಡಿ, ರಜತ್, ನಿತೇಶ್, ಸುನಿಲ್ ಜೈನ್, ಕುಶಾಲಪ್ಪ ಗೌಡ, ಬಾಬು ಮಾದೋಡಿ, ಎಂ.ಕೆ. ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.














