ಮಂಗಳೂರು: ತನ್ನ ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುವುದಾಗಿ ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು
ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು
ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ ಮರುಕಳಿಸುವಂತೆ ಮಾಡುವುದು ನನ್ನ ಉದ್ದೇಶ ಎಂದು ಅವರು ತಿಳಿಸಿದರು.

ಬೆಂಗಳೂರಿನಿಂದ ಆಗಮಿಸಿದ ಪದ್ಮರಾಜ್ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಬಳಿಕ ಆಧುನಿಕ ಮಂಗಳೂರು ಶಿಲ್ಪಿ ಉಳ್ಳಾಲ ಶ್ರೀನಿವಾಸ್ ಮಲ್ಯರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದರು. ಕದ್ರಿಯ ವೀರ ಯೋಧರ ಸ್ಮಾರಕ್ಕೆ ತೆರಳಿ ದೇಶಕ್ಕಾಗಿ ಮಡಿದ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಾಷ್ಟ್ರಪಿತ, ಮಂಗಳೂರು ಪುರಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ, ಬಾವುಡಗುಡ್ಡೆಯಲ್ಲಿ ಹಿರಿಯ ಸ್ವಾತಂತ್ರೃ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ನಮನ ಸಲ್ಲಿಸಿ, ಟಾಗೋರ್ ಪಾರ್ಕ್ನಲ್ಲಿ ರವೀಂದ್ರನಾಥ ಟಾಗೋರ್ ಪ್ರತಿಮೆಗೆ ನಮನ ಸಲ್ಲಿಸಿದರು.





