ಮಂಗಳೂರು: ಇಲ್ಲಿನ ಮೋರ್ಗನ್ಸ್ ಗೇಟ್, ಬೋಳಾರ ಪರಿಸರದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ರೋಡ್ ಶೋ ನಡೆಸಿ, ಮತ ಯಾಚಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಉತ್ತಮ
ಆಡಳಿತ ನೀಡಿರುವ ಕಾಂಗ್ರೆಸ್ ಮೇಲೆ ಜನರು ಭರವಸೆ ಇಟ್ಟಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. ಎಐಸಿಸಿ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್, ಕಾರ್ಪೋರೇಟರ್ ನವೀನ್ ಡಿಸೋಜಾ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಅಶ್ರಫ್ ಕೆ., ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಟಿ.ಎಂ. ಶಹೀದ್ ಮೊದಲಾದವರು ಉಪಸ್ಥಿತರಿದ್ದರು.