ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಚುನಾವಣೆಯ ದಿನ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಮತದಾರರು ಹಾಗೂ ಕಾರ್ಯಕರ್ತರನ್ನು ಭೇಟಿಯಾದರು.ಬೆಳಿಗ್ಗೆ ಕುಟುಂಬ ಸಹಿತರಾಗಿ
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ನಾರಾಯಣಗುರುಗಳ ಆಶೀರ್ವಾದ ಪಡೆದುಕೊಂಡರು. ಬಳಿಕ ಕಪಿತಾನಿಯೋ ಶಾಲೆಯಲ್ಲಿ ಮತ ಚಲಾಯಿಸಿದರು. ನಂತರ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಮಾತನಾಡಿ, ಪ್ರೋತ್ಸಾಹ ನೀಡಿದರು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬವನ್ನು ನಮ್ಮ ಇತರ ಹಬ್ಬಗಳಂತೆ ಸಂಭ್ರಮದಿಂದ ಆಚರಿಸುವಂತೆ ಮೊದಲೇ ತಿಳಿಸಿದ್ದೇ. ಮತದಾರರು ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮದಿಂದಲೇ ಆಚರಿಸಿದ್ದಾರೆ. ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಹಾಗೂ ದನ್ಯವಾದ ಹೇಳಲು ಬಯಸುತ್ತೇನೆ ಎಂದು ಪದ್ಮರಾಜ್ ಹೇಳಿದರು.