ಪಂಜ: ಸಾವಿರ ಸೀಮೆಯ ದೇವಸ್ಥಾನವಾದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪದ್ಮರಾಜ್ ಆರ್ ಪೂಜಾರಿ ಅವರನ್ನು
ಪಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಅವರು ಶಾಲು ಹೊದಿಸಿ, ಅವರ ಗೆಲುವಿಗೆ ಹಾರೈಸಿದರು.
ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಂ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ಗರಡಿ, ಸಂತೋಷ್ ರೈ ಅಡ್ಡಬೈಲು, ಉಮೇಶ್ ಬುಡೆಂಗಿ, ರಜತ್ ಭಟ್ ಪಂಜದಬೀಡು, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಲಿನಿ ಕುದ್ವಾ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಮೊದಲಾದವರು ಉಪಸ್ಥಿತರಿದ್ದರು.