ಪುತ್ತೂರು:ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಸಂಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಸೇವೆ ಸಲ್ಲಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ
ಶ್ರೀಕೃಷ್ಣ ಬೊಳಿಲ್ಲಾಯ ಕಡಮ್ಮಾಜೆ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು ಆರ್ಲಪದವು ಕಿನ್ನಿಮಾಣಿ – ಪೂಮಾಣಿ ದೈವಸ್ಥಾನಕ್ಕೆ ಭೇಟಿ ನೀಡಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಕಾಶ್ ಪಾಣಾಜೆ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ವಲಯ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ರೈ ಕೆದಂಬಾಡಿ, ಪಾಣಾಜೆ ಗ್ರಾಪಂ ಸದಸ್ಯ ನಾರಾಯಣ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.