ಸುಳ್ಯ:ಪೈಚಾರ್ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿತು.ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಬ್ರಹ್ಮಕಲಶೋತ್ಸವದಲ್ಲಿ
ಸಾವಿರಾರು ಮಂದಿ ಭಾಗವಹಿಸಿದ್ದರು.ಏ.23 ರಂದು ಬೆಳಗ್ಗೆ ಶ್ರೀ ಮಹಾಗಣಪತಿ ಹವನ, ಕಲಶ ಪೂಜೆ, ಪ್ರತಿಷ್ಠಾ ಪೂಜೆ ಬೆಳಿಗ್ಗೆ 7.34ರಿಂದ 9.37ಕ್ಕೆ ಒದಗುವ ವೃಷಭ ಲಗ್ನದ ಸುಮೂಹೂರ್ತದಲ್ಲಿ ಬ್ರಹ್ಮಕಲಶೋತ್ಸವ ನಡೆದು, ಪ್ರಸಾದ ವಿತರಣೆ,ಮಧ್ಯಾಹ್ನ ಶ್ರೀ ದೇವಿಯ ನರ್ತನ ಸೇವೆ, ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ ಶ್ರೀ ಮಂತ್ರವಾದಿ ಗುಳಿಗ ದೈವದ ನೇಮೋತ್ಸವದೊಂದಿಗೆ ಪ್ರತಿಷ್ಠೆ ನಡೆಯಿತು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಕ್ಷೇತ್ರಕ್ಕೆ ಆಗಮಿಸಿ ಆಶೀರ್ವಚನ ನೀಡಿದರು.














