ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅ.2ರಿಂದ ಈ ಪಂದ್ಯ ನಡೆಯಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ತಲಾ ಎರಡರಲ್ಲಿ ಸೋಲು-ಗೆಲುವು ಕಂಡಿರುವ
ಪಾಕ್ಗೆ ಈ ಪಂದ್ಯ ಮಹತ್ವದ್ದಾಗಿದೆ. ಪಾಯಿಂಟ್ ಟೇಬಲ್ನಲ್ಲಿ ಮೇಲೇಳಲು ಬಾಬರ್ ಪಡೆಗೆ ಇದೊಂದು ಉತ್ತಮ ಅವಕಾಶ. ಇತ್ತ ಅಫ್ಘಾನ್ ಪಡೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಕೇವಲ ಒಂದರಲ್ಲಷ್ಟೆ ಗೆದ್ದು ಪಾಯಿಂಟ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ.
ಪಾಕ್ಗೆ ನಾಯಕ ಬಾಬರ್ ಅಝಂ ಕಡೆಯಿಂದ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬರಬೇಕಿದೆ. ಓಪನರ್ಗಳಾದ ಅಬ್ದುಲ್ಲ ಶಾಹಿದಿ ಹಾಗೂ ಇಮಾಮ್-ಉಲ್-ಹಖ್ ಉತ್ತಮ ಆರಂಭ ನೀಡುತ್ತಿದೆ. ಮಧ್ಯಮ ಕ್ರಮಾಂಕದಲ್ಲಿ ರಿಝ್ವಾನ್, ಶಕೀಲ್, ಇಫ್ತಿಖರ್ ನೆರವಾಗಬೇಕು. ಬೌಲಿಂಗ್ನಲ್ಲಿ ಶಾಹಿನ್ ಅಫ್ರಿದಿ ಮಾತ್ರ ವಿಕೆಟ್ ಟೇಕರ್ ಆಗಿದ್ದಾರೆ. ಬೌಲಿಂಗ್ನಲ್ಲಿ ಅಫ್ಘಾನ್ ರಶೀದ್ ಖಾನ್ ಮತ್ತು ಮುಜೀಬ್ ಉರ್ ರಹಮಾನ್ ಮೇಲೆ ಹೆಚ್ಚು ಅವಲಂಬಿತವಾಗಿದೆ.
ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.