ಕರಾಚಿ :ಸೌತ್ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡವು 353 ರನ್ಗಳ ಗುರಿ ಬೆನ್ನತ್ತಿದೆ. ಈ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಗೆದ್ದ ತಂಡವೆಂಬ ಹೆಗ್ಗಳಿಕೆಯನ್ನು ಪಾಕ್ ಪಡೆ ತನ್ನದಾಗಿಸಿಕೊಂಡಿದೆ. ಅಲ್ಲದೆ ಈ ಜಯದೊಂದಿಗೆ ತ್ರಿಕೋನ ಸರಣಿಯ ಫೈನಲ್ಗೆ ಪಾಕಿಸ್ತಾನ ತಂಡ ಪ್ರವೇಶಿಸಿದೆ. ಈ ಪಂದ್ಯದಲ್ಲಿ
ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.ಅದರಂತೆ ಇನಿಂಗ್ಸ್ ಆರಂಭಿಸಿದ ಟೆಂಬಾ ಬವುಮಾ 82 ರನ್ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು.ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ಬ್ರೀಟ್ಝ್ಕೆ 84 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 83 ರನ್ ಚಚ್ಚಿದರು.ಆ ಬಳಿಕ ಬಂದ ಹೆನ್ರಿಕ್ ಕ್ಲಾಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೇವಲ 56 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 87 ರನ್ ಬಾರಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 352 ರನ್ ಕಲೆಹಾಕಿತು.
353 ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಫಖರ್ ಝಮಾನ್ (41) ಉತ್ತಮ ಆರಂಭ ಒದಗಿಸಿದರು. ಆದರೆ ಬಾಬರ್ ಆಝಂ (23) ಹಾಗೂ ಸೌದ್ ಶಕೀಲ್ (15) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಮೊಹಮ್ಮದ್ ರಿಝ್ವಾನ್ ಹಾಗೂ ಸಲ್ಮಾನ್ ಅಘಾ ದ್ವಿಶತಕದ ಜೊತೆಯಾಟದೊಂದಿಗೆ ಇನಿಂಗ್ಸ್ ಕಟ್ಟಿದರು.ಇದರ ನಡುವೆ ಸಲ್ಮಾನ್ ಅಘಾ 87 ಎಸೆತಗಳಲ್ಲಿ ಶತಕ ಪೂರೈಸಿದರೆ, ಮೊಹಮ್ಮದ್ ರಿಝ್ವಾನ್ 106 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. ಶತಕದ ಬಳಿಕ ಕೂಡ ಪಾಲುದಾರಿಕೆ ಮುಂದುವರೆಸಿದ ಈ ಜೋಡಿಯು ನಿರಾಯಾಸವಾಗಿ ಸೌತ್ ಆಫ್ರಿಕಾ ವೇಗಿಗಳನ್ನು ಎದುರಿಸಿದರು.ಅಂತಿಮವಾಗಿ ಸಲ್ಮಾನ್ ಅಘಾ ಅಜೇಯ 134 ರನ್ ಬಾರಿಸಿದರೆ, ರಿಝ್ವಾನ್ ಅಜೇಯ 122 ರನ್ ಸಿಡಿಸಿದರು. ಈ ಮೂಲಕ 48.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿ ಪಾಕಿಸ್ತಾನ್ ತಂಡಕ್ಕೆ 7 ವಿಕೆಟ್ಗಳ ಜಯ ತಂದುಕೊಟ್ಟರು.ಈ ವಿಜಯವು ಏಕದಿನ ಕ್ರಿಕೆಟ್ನಲ್ಲಿ ಪಾಕಿಸ್ತಾನ್ ತಂಡದ ದಾಖಲೆಯ ಗೆಲುವು. ಅಂದರೆ ಪಾಕ್ ಪಡೆ ಇದೇ ಮೊದಲ ಬಾರಿಗೆ 350+ ರನ್ಗಳ ಗುರಿಯನ್ನು ಬೆನ್ನತ್ತಿ ಗೆಲುವು ದಾಖಲಿಸಿದೆ.