ಸಿಡ್ನಿ: ಮಳೆಬಾಧಿತ ಟ್ವೆಂಟಿ-20 ವಿಶ್ವಕಪ್‌ನ ಸೂಪರ್-12ರ ಸುತ್ತಿನ ಗ್ರೂಪ್-2ರ ಪಂದ್ಯದಲ್ಲಿ ಪಾಕಿಸ್ತಾನ ತಂಡವು ದಕ್ಷಿಣ ಆಫ್ರಿಕಾವನ್ನು 33 ರನ್ ಅಂತರದಿಂದ ಸೋಲಿಸಿದೆ. ಟೂರ್ನಮೆಂಟ್‌ನಲ್ಲಿ ಎರಡನೇ ಗೆಲುವು ದಾಖಲಿಸಿದ ಪಾಕ್ ಸೆಮಿ ಫೈನಲ್ ತಲುಪುವ ಅಲ್ಪ ವಿಶ್ವಾಸವನ್ನು ಇಟ್ಟುಕೊಂಡಿದೆ. ಪಾಕಿಸ್ತಾನಕ್ಕೆ ಸೆಮಿ ಫೈನಲ್ ಅವಕಾಶ ಸಿಗಬೇಕಾದರೆ ನ.6ರಂದು ಬಾಂಗ್ಲಾದೇಶವನ್ನು ಮಣಿಸಬೇಕು. ಅದೇ ದಿನ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ಗೆಲ್ಲಬೇಕು. ಇದರಿಂದ
ಸೆಮಿಫೈನಲ್ ಪ್ರವೇಶ ಸುಗಮವಾಗಲು ಟೀಂ ಇಂಡಿಯಾಕ್ಕೆ ನ.6ರಂದು ಜಿಂಬಾಬ್ವೆ ವಿರುದ್ಧ ಗೆಲುವು ಅನಿವಾರ್ಯವಾಗಿದೆ.
ಗುರುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲ್ಲಲು 186 ರನ್ ಗುರಿ ಬೆನ್ನಟ್ಟುತ್ತಿದ್ದಾಗ ಮಳೆ ಆಗಮಿಸಿತು. ಆಗ ದಕ್ಷಿಣ ಆಫ್ರಿಕಾವು 9 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿತ್ತು. ಮಳೆ ನಿಂತ ಬಳಿಕ ಪಂದ್ಯ ಪುನರಾರಂಭವಾದಾಗ ದಕ್ಷಿಣ ಆಫ್ರಿಕಾ ತಂಡಕ್ಕೆ ಡಿಎಲ್ ನಿಯಮದ ಪ್ರಕಾರ 14 ಓವರ್‌ಗಳಲ್ಲಿ 142 ರನ್ ಪರಿಷ್ಕೃತ ಗುರಿ ನೀಡಲಾಯಿತು. ಶಾಹೀನ್ ಶಾ ಅಫ್ರಿದಿ(3-14) ನೇತೃತ್ವದ ಪಾಕ್ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾವು 14 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಅಫ್ರಿದಿಗೆ ಶಾದಾಬ್ ಖಾನ್(2-16) ಸಾಥ್ ನೀಡಿದರು. ಇದಕ್ಕೂ ಮೊದಲು ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಪಾಕಿಸ್ತಾನ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್ ಇಫ್ತಿಕಾರ್ ಅಹ್ಮದ್(51 ರನ್, 35 ಎಸೆತ, 3 ಬೌಂಡರಿ, 2 ಸಿಕ್ಸರ್)ಹಾಗೂ ಆಲ್‌ರೌಂಡರ್ ಶಾದಾಬ್ ಖಾನ್(52 ರನ್, 22 ಎಸೆತ, 3 ಬೌಂಡರಿ, 4 ಸಿಕ್ಸರ್)ಅರ್ಧಶತಕದ ಕೊಡುಗೆಯ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು.