ಸುಳ್ಯ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಸುಳ್ಯ ಭೇಟಿ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ
ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸನ್ಮಾನಿಸಿದರು.ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ಕೆಡಿಪಿ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಪ್ರಮುಖರಾದ ನಂದರಾಜ ಸಂಕೇಶ,ಮಹೇಶ್ ಬೆಳ್ಳಾಳ್ಕರ್, ಚಂದ್ರಶೇಖರ ಪಲ್ಲತ್ತಡ್ಕ, ಕೇಶವ ಮೊರಂಗಲ್ಲು ಮತ್ತಿತರರು ಇದ್ದರು.












