ಸುಳ್ಯ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ಜ.6ರಂದು ಸುಳ್ಯ ತಾಲೂಕಿಗೆ ಭೇಟಿ ನೀಡಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಬದ, ಮೈಲ, ಬಾಕುಡ, ನಲಿಕೆ, ನಲ್ಕದಾಯ, ಅಜಿಲ, ಭೈರ, ಚೆನ್ನದಾಸರ್,ಮಲೆಕುಡಿಯ, ಪರವನ್, ಕೊರಗ ಹಾಗೂ ಇತರ ಅಲೆಮಾರಿ ಸಮುದಾಯಗಳ ಕುಂದುಕೊರತೆ ಮತ್ತು
ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಸಭೆಯಲ್ಲಿ ವಿಮುಕ್ತ ಬುಡಕಟ್ಟು ಒಕ್ಕೂಟದ ರಾಜ್ಯ ಜಂಟಿ ಕಾರ್ಯದರ್ಶಿ ಆನಂದ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ತಹಶೀಲ್ದಾರ್ ಎಂ.ಮಂಜುಳ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ ಬಿ, ಕರ್ನಾಟಕ ಪ.ಜಾ, ಪ.ಪಂ. ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿ ಸದಸ್ಯ ಉಪಸ್ಥಿತರಿದ್ದರು. ಪಂಜ ಗ್ರಾಮದ ಪಲ್ಲತ್ತೋಡಿ ಕೊರಗ ಕಾಲನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಂದು ಕೊರತೆ ಆಲಿಸಿ, ಸಲಹೆ ಸೂಚನೆ ನೀಡಿದರು.












