ಸಂಪಾಜೆ:ಮುಂದೆ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ನ ಒಂದನೇ ವಾರ್ಡ್ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುವುದಾಗಿ ಆಂಬುಲೆನ್ಸ್ ಚಾಲಕ ಹಾಗು ಸಾಮಾಜಿಕ ಕಾರ್ಯಕರ್ತರಾದ ತಾಜುದ್ದೀನ್ ಟರ್ಲಿ ತಿಳಿಸಿದ್ದಾರೆ. ಇದುವರೆಗೆ ಯಾವುದೇ
ಪಕ್ಷದಲ್ಲಿ ಗುರಿತಿಸಿಕೊಂಡಿಲ್ಲ. ಆದರೆ ನಿರಂತರ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಒಂದನೇ ವಾರ್ಡ್ನಲ್ಲಿ ಮೀಸಲಾತಿ ಪ್ರಕಾರ ಅವಕಾಶವಿದ್ದು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಲ್ಲಾ ಪಕ್ಷದವರ ಬೆಂಬಲ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರ ಮೀಸಲಾತಿ ಪ್ರಕಟಗೊಂಡ ನಂತರ ಗ್ರಾಮಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.






