ರಾಜ್ಕೋಟ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಸ್ಫೋಟಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. ರಾಜ್ಕೋಟ್ನ ನಿರಂಜನ್ ಶಾ ಮೈದಾನದಲ್ಲಿ ವಿದರ್ಭ ಹಾಗೂ ಬರೋಡಾ ತಂಡಗಳು ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು
ಮೊದಲ 62 ಎಸೆತಗಳಲ್ಲಿ 66 ರನ್ ಸಿಡಿಸಿದ್ದರು. ಆದರೆ, 39 ಓವರ್ನಲ್ಲಿ ವಿದರ್ಭ ತಂಡದ ಸ್ಪಿನ್ನರ್ ಪಾರ್ಥ್ ರೇಖಾಡೆ ಅವರ ಬೌಲಿಂಗ್ನ ಒಂದೇ ಓವರ್ನಲ್ಲಿ 5 ಸಿಕ್ಸರ್ ಹಾಗೂ 1 ಬೌಂಡರಿ ಗಳಿಸುವ ಮೂಲಕ 68 ಎಸೆತಗಳಲ್ಲಿ ಶತಕ ಪೂರೈಸಿದರು.ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಬರೋಡ ತಂಡ 71 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಬ್ಯಾಟಿಂಗ್ ಇಳಿದ ಹಾರ್ದಿಕ್ ಪಾಂಡ್ಯ, 68 ಎಸೆತಗಳಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ಮಿಂಚಿದರು. ಶತಕದ ಬಳಿಕವೂ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ ಅವರು 92 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 8 ಬೌಂಡರಿಗಳ ನೆರವಿನಿಂದ 133 ರನ್ ಕಲೆಹಾಕಿದರು.ಹಾರ್ದಿಕ್ ಪಾಂಡ್ಯ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಬರೋಡಾ ತಂಡ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 293 ರನ್ ಕಲೆಹಾಕಿತು.












