ಪಂಜ:ಡಾನ್ಸ್ & ಬೀಟ್ಸ್ ಪಂಜ ನೇತೃತ್ವದಲ್ಲಿ ಅದ್ವೈತ್ ಮಕ್ಕಳ ಬೇಸಿಗೆ ಶಿಬಿರ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆರಂಭಗೊಂಡಿತು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಅಧ್ಯಕ್ಷತೆ ವಹಿಸಿದ್ದರು. ಕಲ್ಮಡ್ಕ ಗ್ರಾಮ ಪಂಚಾಯತ್

ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಉದ್ಘಾಟಿಸಿದರು. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ,ಸಂಚಾರಿ ಅರಣ್ಯ ದಳದ ವಲಯ ಅರಣ್ಯಾಧಿಕಾರಿ ಸಂತೋಷ್ ರೈ, ಪಂಜ ವ್ಯವಸ್ಥಾಪನಾ ಸಮಿತಿ ಸಮಿತಿಯ ಸದಸ್ಯ ಸಂತೋಷ್ ಕುಮಾರ್ ರೈ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು, ಪಂಜ ವನಿತಾ ಸಮಾಜದ ಅಧ್ಯಕ್ಷೆ ಸುಮಾ ಕುದ್ವ, ಜೀವನ್ ಬೆಳ್ಳಾರೆ, ವಿದು ಉಚ್ಚಿಲ ಉಪಸ್ಥಿತರಿದ್ದರು.