ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಇಂದು ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯ ಧನು ಪೂಜೆಯಲ್ಲಿ ಭಾಗವಹಿಸಿ ಧನು ಪೂಜೆಯ ವಿಶೇಷ ಪ್ರಸಾದ ಸ್ವೀಕರಿಸಿದರು. ದೇಗುಲದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ಶಾಸಕಿಯನ್ನು ಸ್ವಾಗತಿಸಿ ಗೌರವಿಸಿದರು. ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ ಧರ್ಮಣ್ಣ ನಾಯ್ಕ ಗರಡಿ, ಪವಿತ್ರ ಮಲ್ಲಿಟ್ಟಿ, ಮಾಲಿನಿ ಕುದ್ವ ಮತ್ತಿತರರು ಉಪಸ್ಥಿತರಿದ್ದರು.













