ಪಂಜ:ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27 ರಿಂದ ಆ.29 ತನಕ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ನಡೆಯಲಿದೆ.ಆ ಪ್ರಯುಕ್ತ ಆ.24.ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.ಚಿತ್ರಕಲಾ ಮತ್ತು
ಕಸದಿಂದ ರಸ -ಸ್ಪರ್ಧೆ ,ಕೇರಂ ಮತ್ತು ಚೆನ್ನೆಮಣೆ -ಸ್ಪರ್ಧೆ ನಡೆಯಿತು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಉದ್ಘಾಟಿಸಿದರು
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಮುಖ್ಯ ಅತಿಥಿಯಾಗಿದ್ದರು.

ಸಭಾಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ತೋಟ ವಹಿಸಿದ್ದರು. ಸಾರ್ವಜನಿಕ ಆರಾಧನಾ ಸಮಿತಿ ಅಧ್ಯಕ್ಷ ಸವಿತಾರ ಮುಡೂರು, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ , ಸಾಂಸ್ಕೃತಿಕ ಸ್ಪರ್ಧೆಗಳ ಸಂಚಾಲಕ ಸತೀಶ್ ಪಂಜ, ಚೆನ್ನೆಮಣೆ ಮತ್ತು ಕೇರಂ ಸ್ಪರ್ಧೆ ಸಂಚಾಲಕ ಮನೋಹರ ಕಾರ್ಜ ಪಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುದರ್ಶನ ಪಟ್ಟಾಜೆ ಪ್ರಾರ್ಥಿಸಿದರು. ಕುಸುಮಾದರ ಕೆರೆಯಡ್ಕ ಸ್ವಾಗತಿಸಿ,ಜನಾರ್ದನ ನಾಗತೀರ್ಥ ವಂದಿಸಿದರು. ಕೌಶಿಕ್ ಕುಳ ಕಾರ್ಯಕ್ರಮ ನಿರೂಪಿಸಿದರು.












