ಸುಳ್ಯ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಬಲಗೈ ಬಂಟ, ಕಾರಣಿಕದ ದೈವ ಕಾಚು ಕುಜುಂಬ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಕಲಶೋತ್ಸವದ ಅಂಗವಾಗಿ ಡಿ.3 ಹಾಗೂ 4ರಂದು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಹೋಮ ಹವನಗಳು ನಡೆದವು.ಎರಡನೇ ದಿನವಾದ ಡಿ.4ರಂದು ಸಂಜೆ ದೈವಸ್ಥಾನದಲ್ಲಿ
ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ ನಡೆದು ಅನ್ನ ಸಂತರ್ಪಣೆ ನಡೆಯಿತು.
ಡಿ.3ರಂದು ಸಂಜೆ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ವನದುರ್ಗಾ ಹೋಮ. ನಡೆಯಿತು.

ನೂತನ ದೈವಸ್ಥಾನದಲ್ಲಿ ಡಾ.ದೇವಿಪ್ರಸಾದ್ ಕಾನತ್ತೂರ್,
ಡಿ.5ರಂದು ಪೂ.7:30ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ. 10:29ರಿಂದ 11:30ರ ತನಕ ನಡೆಯುವ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ, ತಂಬಿಲ ಸೇವೆ ನಡೆಯಲಿದೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ತವಸ್ಥಾಪನಾ ಸಮಿತಿ ಸದಸ್ಯರು, ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.














