ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ ಫೆ.1ರಂದು ಧ್ವಜಾರೋಹಣ ನಡೆಯುವ ಮೂಲಕ ಆರಂಭಗೊಂಡಿದೆ. ಫೆ.1ರಂದು ಸಂಜೆ ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು.ವಿವಿಧ ವೈಧಿಕ ಕಾರ್ಯಕ್ರಮಗಳು ನಡೆದು ರಾತ್ರಿ ಧ್ವಜಾರೋಹಣ
ನೆರವೇರಿತು. ಫೆ.1ರಂದು ಬೆಳಿಗ್ಗಿನಿಂದ
ವಿವಿಧ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ ವೇದ ಪಾರಾಯಣ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಕ್ಷೇತ್ರಕ್ಕೆ ಆಗಮಿಸಿದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ

ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಮಾಲಿನಿ ಕುದ್ವ, ಪವಿತ್ರಾ ಮಲ್ಲೆಟ್ಟಿ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಭಟ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಉಮೇಶ್ ಬುಡೆಂಗಿ ಬಳ್ಪ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಡಾ.ರಾಮಯ್ಯ ಭಟ್, ಪದ್ಮನಾಭ ರೈ ಅಗೋಳಿಬೈಲುಗುತ್ತು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಸುವರ್ಣಿನಿ ಎನ್.ಎಸ್, ಕುದ್ವ ಬಾಲಕೃಷ್ಣ ಗೌಡ, ರಜಿತ್ ಭಟ್ ಪಂಜದಬೀಡು,ಗಂಗಾಧರ ಗೌಡ ಗುಂಡಡ್ಕ, ಶಂಕರ ಭಟ್ ಮುಚ್ಚಿಲ, ಪೈಂದೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಕೇರ್ಪಡ ಮಹಿಷ ಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ರೈ ಪಟ್ಟೆ ಎಣ್ಮೂರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.





