ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ದೇವಳದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು.ಫೆ.9 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ
ಶ್ರೀ ಶಿರಾಡಿ ಮತ್ತು ಶ್ರೀ ರುದ್ರ ಚಾಮುಂಡಿ ದೈವಗಳ ನೇಮೋತ್ಸವ ನಡೆದು ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತುಫೆ.8.ರಂದು ರಾತ್ರಿ ಪುತ್ಯದಿಂದ ಶ್ರೀ ಶಿರಾಡಿ ಮತ್ತು ಶ್ರೀ ರುದ್ರ ಚಾಮುಂಡಿ ದೈವದ ಭಂಡಾರ ತೆಗೆಯುವುದು ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಗೌರವ ಸಲಹೆಗಾರು , ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.







