ಪಂಜ: ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಇಂದು(ಫೆ.6) ರಾತ್ರಿ ವೈಭವದ ಬ್ರಹ್ಮ ರಥೋತ್ಸವ ನಡೆಯಲಿದೆ.ಪೂ.8ಕ್ಕೆ ಮಹಾಪೂಜೆ, ಶ್ರೀ ದೇವರ ಉತ್ಸವ, ಮಧ್ಯಾಹ್ನ 12-30ಕ್ಕೆ ಮಹಾಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ, ರಾತ್ರಿ
7ಕ್ಕೆ ಶ್ರೀ ದೇವರ ಉತ್ಸವ, ರಾತ್ರಿ 11ರಿಂದ ಬ್ರಹ್ಮ ರಥೋತ್ಸವ, ಕಾಚುಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ, ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ.

ಫೆ.5ರಂದು ಹಗಲು ಶ್ರೀ ದೇವರ ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ ನಡೆದು ರಾತ್ರಿ ದೀಪೋತ್ಸವ, ಮಹಾಪೂಜೆ, ಶ್ರೀ ದೇವರ ಉತ್ಸವ, ಬೀದಿಕಟ್ಟೆ ಪೂಜೆ, ಕಾಚುಕುಜುಂಬ, ಶಿರಾಡಿ, ರುದ್ರಚಾಮುಂಡಿ ದೈವಗಳ ನರ್ತನ ಸೇವೆ, ವಸಂತ ಕಟ್ಟೆಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ ನಡೆಯಿತು.
ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸಲಹಾ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.







