ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಬಂಟಮಲೆಯಿಂದ ತೀರ್ಥ ತರುವ ಕಾರ್ಯಕ್ರಮ ನಡೆಯಿತು. ಫೆ.2 ರಂದು ಮುಂಜಾನೆ ಬಂಟಮಲೆಯ ತೀರ್ಥದ ಸ್ಥಳದಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತರಲಾಯಿತು. ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು , ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.ಇಂದು ರಾತ್ರಿ ಗಂಟೆ 7 ರಿಂದ ಪ್ರಣತಿ ಚೈತನ್ಯ ಪದ್ಯಾಣ ಮತ್ತು ಪದಯಾನ ತಂಡದವರಿಂದ ಭರತನಾಟ್ಯ ಪ್ರದರ್ಶನ ಗೊಳ್ಳಲಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









