ಸುಳ್ಯ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ‘ಪಂಜ ಮಕ್ಕಳ ಹಬ್ಬ’ ಬೇಸಿಗೆ ಶಿಬಿರ ಉದ್ಘಾಟನೆಗೊಂಡಿತು. ಡಾನ್ಸ್ ಬೀಟ್ಸ್ ಪಂಜ ಅದ್ವೈತ್ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು
ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ವಹಿಸಿದ್ದರು. ಉದ್ಘಾಟನೆಯನ್ನು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಪುಷ್ಪ ಡಿ ಪ್ರಸಾದ್ ಹಾಗೂ ಪಂಜ ವಲಯ ಅರಣ್ಯಾಧಿಕಾರಿ ಪ್ರಕಾಶ್, ಜೀವನ್ ಬೆಳ್ಳಾರೆ ಉಪಸ್ಥಿತರಿದ್ದರು.
ಅನಘ ಬಳ್ಪ ಪ್ರಾರ್ಥಿಸಿ, ತನ್ವಿ ಚಿಕ್ಮುಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಜಿತ್ ರೈ ಪಟ್ಟೆ ವಂದಿಸಿದರು.


















