ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ನಾಲ್ಕನೇ ದಿನವಾದ ಸೆ.25ರಂದು ಬೆಳಿಗ್ಗೆ ಮಧ್ಯಾಹ್ನ, ರಾತ್ರಿ ಮಹಾಪೂಜೆ, ನಡೆಯಿತು. ಸಂಜೆ ಭಜನಾ ಸಂಕೀರ್ತನೆ, ರಾತ್ರಿ

ಕಲಾ ಸೇವೆ ನಡೆಯಿತು.ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು. ಸಂಜೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೇನ್ಯ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.ಕಲಾ ಸೇವೆಯಲ್ಲಿ ಶ್ರೀ ಚಾಮುಂಡೇಶ್ವರಿ ಕುಣಿತ ಭಜನಾ ತಂಡ ಪಲ್ಲೋಡಿ, ಪಂಜ ಇವರಿಂದ’ಕುಣಿತ ಭಜನೆ’ ನಡೆಯಿತು.
ಇಂದಿನ ಕಾರ್ಯಕ್ರಮ:
ಪಂಜ ವಲಯ ಹವ್ಯಕ ಮಹಿಳಾ ತಂಡ ದಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಕಲಾ ಸೇವೆಯಲ್ಲಿ ಶ್ರದ್ಧಾಲಕ್ಷ್ಮಿ ಮತ್ತು ಶ್ರಿಯಾಶಂಕರಿ ಇವರಿಂದ ‘ಭಕ್ತಿಗಾಯನ’ ನಡೆಯಲಿದೆ.











