ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ನವರಾತ್ರಿ ಸಂಭ್ರಮದ ಅಂಗವಾಗಿ ಪ್ರತಿದಿನ ರಾತ್ರಿ ಪೂಜೆ, ಭಜನಾ ಸಂಕೀರ್ತನೆ, ಕಲಾ ಸೇವೆ ನಡೆಯುತಿದೆ. ಅ.18 ರಂದು
ಶ್ರೀ ಶಾರದಾಂಬಾ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ,ಶ್ರೀ ಶಾರದಾಂಬಾ ಯಕ್ಷಗಾನ ಅಧ್ಯಯನ ಕೇಂದ್ರ,ಕಲಾಕ್ಷೇತ್ರ ಪಂಜ ಇವರಿಂದ ನಾಟ್ಯ ವೈಭವ ನಡೆಯಿತು.ಮಹಾಪೂಜೆ , ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ದೇಗುಲದ

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಗೌರವ ಸಲಹೆಗಾರರು,ಭಕ್ತಾದಿಗಳು ಪಾಲ್ಗೊಂಡಿದ್ದರು.
ಅ.19 ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇನ್ಯ ಇವರಿಂದ ಭಜನಾ ಸಂಕೀರ್ತನೆ. ಗೀತ ಸುಧಾ ತೋಟ ಇವರಿಂದ ‘ಭಕ್ತಿ ಗಾಯನ’ ನಡೆಯಲಿದೆ.










