ಪಂಜ: ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಪಂಚಶ್ರೀ ಪ್ರೀಮಿಯರ್ ಲೀಗ್ ‘ಪಂಚಶ್ರೀ ಟ್ರೋಫಿ’ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಪಂಜ ಕೋಟಿ ಚೆನ್ನಯ ಕ್ರೀಡಾಂಗಣ ಗರಡಿ ಮುಂಭಾಗದ ಮೈದಾನದಲ್ಲಿ ನಡೆಯಿತು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಪಂದ್ಯಾಟವನ್ನು
ಉದ್ಘಾಟಿಸಿದರು.ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ಅತಿಥಿಗಳಾಗಿದ್ದರು. ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.

ಕ್ರಿಕೆಟ್ ಪಂದ್ಯಾಟದಲ್ಲಿ ರಂಜಿತ್ ಜಬಳೆ ಮಾಲಕತ್ವದ ಶ್ರೀವಿಷ್ಣು ಸ್ಟ್ರೈಕರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.
ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಜಯನಗರ ವಿಜೇತರಿಗೆ ಬಹುಮಾನ ವಿತರಿಸಿದರು. ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷ ಚಂದ್ರಶೇಖರ ಕರಿಮಜಲು ಉಪಸ್ಥಿತರಿದ್ದರು.









