ಪಂಜ:ಹಿರಿಯರು ಕಟ್ಟಿ ಬೆಳೆಸಿದ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ನಾವೆಲ್ಲ ಮಾಡಬೇಕು. ಊರಿನವರ ಸಹಕಾರ ಇದ್ದರೆ ಸರಕಾರಿ ಶಾಲೆಗಳು ಉನ್ನತ ಮಟ್ಟಕೆ ಬೆಳೆಯಲು ಕಾರಣವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು
ಅವರು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ
ಅಮೃತ ಪಥ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕಾಲೇಜನ್ನು ಕೆಪಿಎಸ್ ಮಾಡಿರುವುದು ಒಂದು ಗರಿ ಬಂದಂತೆ. ಕಾಲೇಜಿನ ಮುಂದಿನ ಬೆಳವಣಿಗೆಯಲ್ಲಿ ಸಹಕಾರ ನೀಡುತ್ತೇನೆ ಎಂದು ಹೇಳಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ವಾವಲಂಬನೆ ಜೀವನ ನಡೆಸಲು ಶಿಕ್ಷಣ ಅಗತ್ಯ. ಶಿಕ್ಷಣ ನೀಡಿದ ನಿವೃತ್ತ ಗುರುಗಳಲ್ಲಿರುವ ಮೌಲ್ಯಗಳು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಜಳಕದಹೊಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು ಕೆ ಉಪಸ್ಥಿತರಿದ್ದರು.
ಉದ್ಘಾಟನೆ:
ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಪಥ ಕಾರ್ಯಕ್ರಮವನ್ನು ಖ್ಯಾತ ಕವಿ ಸುಬ್ರಾಯ ಚೊಕ್ಕಾಡೊ ಉದ್ಘಾಟಿಸಿದರು.
ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಯಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ. ಟೀಮ್ ಅಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಮಾತನಾಡಿದರು
ಅಮೃತ ಪಥ ಸಮಿತಿ ಅಧ್ಯಕ್ಷ ಜಾಕೆ ಮಾಧವ ಗೌಡ ಸಭಾಧ್ಯಕ್ಷತೆ ವಹಿಸಿದ್ದರು.

















