ಪಂಜ:ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ
ಅಧ್ಯಕ್ಷರಾಗಿ ಚಂದ್ರಶೇಖರ ಶಾಸ್ತ್ರಿ ಸಿ ಮತ್ತು ಉಪಾಧ್ಯಕ್ಷರಾಗಿ ಸದಾನಂದ ಕಾರ್ಜ ಅವಿರೋಧ ಆಯ್ಕೆಯಾದರು.ಚುನಾವಣೆಯಲ್ಲಿ 12 ಸ್ಥಾನದಲ್ಲೂ
ಬಿಜೆಪಿ ಬೆಂಬಲಿತ
ಸಹಕಾರ ಭಾರತಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಡಳಿತ ಮಂಡಳಿಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿ ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆಯಾದರು.ನಿರ್ದೇಶಕರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.