ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಜ.3ರಂದು ನಡೆಯಿತು. ಶ್ರೀ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದೇವಳದ

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ,ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್,ವ್ಯವಸ್ಥಾಪನಾ ಸಮಿತಿ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ,ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ,ಮಾಲಿನಿ ಕುದ್ವ, ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇರ್ಪಡ ಮಹಿಷ ಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಾಚಣ್ಣ ಹುದೇರಿ, ಜಗದೀಶ್ ನೆರಳ ಉದಯ,ನಾರಾಯಣ ಪಲ್ಲೋಡಿ ,ರತ್ನಾಕರ ಕಜೆ, ಬಾಲಕೃಷ್ಣ ಅಡ್ಡಬೈಲ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.












