ಪಂಜ:ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಕಳೆದ ವಾರ ನಡೆದ ಭಜನಾ ತರಬೇತಿ ಶಿಬಿರ ದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಮೇ.13 ರಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಸಂಜೆ ಭಜನಾ ಕಾರ್ಯಕ್ರಮ ನಡೆಯಿತು.ದೇವಳದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾದ ಡಾ. ದೇವಿಪ್ರಸಾದ್ ಕಾನತ್ತೂರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶ್ರೀ ದೇವರ ಪ್ರಸಾದ ನೀಡಿದರು.
ಭಜನಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿದ್ದ ಡಾ.ದೇವಿಪ್ರಸಾದ್ ಕಾನತ್ತೂರ್ ರವರು “ವಿದ್ಯಾರ್ಥಿಗಳು ಭಜನಾ ತರಬೇತಿ ಪಡೆದರೆ ಸಾಲದು. ತರಬೇತಿ ಪಡೆದು ದೇವಳದಲ್ಲಿ ಭಜನಾ ಸಂಕೀರ್ತನೆ ನಡೆಸ ಬೇಕು” ಎಂದು ಭಾಷಣದಲ್ಲಿ ಹೇಳಿದ್ದರು. ಅತಿಥಿಗಳ ಮಾತಿನ ಸಲಹೆಯನ್ನು ವಿದ್ಯಾರ್ಥಿಗಳು ಸ್ವೀಕರಿಸಿದ್ದು ಭಜನಾ ಸಂಕೀರ್ತನೆ ನಡೆಸಿದ್ದಾರೆ.