ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ನ.9ರಂದು ಸಂಜೆ ಬಲೀಂದ್ರ ಮರ ಹಾಕಿ ಬಲೀಂದ್ರ ಪೂಜೆ, ತುಳಸಿ ಪೂಜೆ ಹಾಗೂ ಗೋಪೂಜೆ ನಡೆಯಿತು. ದೇಗುಲದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಎಣ್ಮೂರು, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಮಾಲಿನಿ ಕುದ್ವ, ಪೈಂದೋಡಿ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕುದ್ವ ,ಹಾಗೂ ಊರ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು


































