ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗು ವ್ಯವಸ್ಥಾಪನಾ ಸಮಿತಿಯ ಮೇಲಿನ ಆರೋಪದ ಕುರಿತು ಸತ್ಯಪ್ರಮಾಣ ಮಾಡಲು ನಿರ್ಧರಿಸಿದ್ದೇನೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಹೇಳಿದ್ದಾರೆ. ತಮ್ಮ ಮೇಲೆ
ಅವ್ಯವಹಾರದ ಆರೋಪ ಹೊರಿಸಿದವರು ಕೂಡ ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.









