ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.5 ರಂದು ಶ್ರೀ ದೇವರ ದರ್ಶನ ಉತ್ಸವ ಭಕ್ತಿ ಸಂಭ್ರಮದಿಂದ ನಡೆಯಿತು.
ಪೂರ್ವಾಹ್ನ ಶ್ರೀ ದೇವರ ಬಲಿ ಹೊರಟು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ದೀಪೋತ್ಸವ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಬೀದಿಕಟ್ಟೆ ಪೂಜೆ ಹಾಗೂ
ಕಾಚುಕುಜುಂಬ, ಶಿರಾಡಿ, ರುದ್ರಚಾಮುಂಡಿ ದೈವಗಳ ನರ್ತನ ಸೇವೆ, ವಸಂತ ಕಟ್ಟೆಪೂಜೆ, ಶ್ರೀ ದೇವರ ಉತ್ಸವ, ಅನ್ನಸಂತರ್ಪಣೆ ನಡೆಯಿತು. ಶ್ರೀ ದೇವಳದ ಬಲಿಯೊಂದಿಗೆ ವೇದ ಮಂತ್ರ ಘೋಷ , ಸ್ಯಾಕ್ಸೋಫೋನ್, ಚೆಂಡೆ , ಬ್ಯಾಂಡ್ ವಾಲಗ ಬೇತಾಳಗಳು,ಗೊಂಬೆಗಳು ಮೆರುಗು ನೀಡಿದವು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷರಾದ ಡಾ.ರಾಮಯ್ಯ ಭಟ್, ಪದ್ಮನಾಭ ರೈ ಅಗೋಳಿಬೈಲು ಗುತ್ತು, ಸದಸ್ಯರಾದ ಸತ್ಯರಾಯಣ ಭಟ್ ಕಾಯಂಬಾಡಿ, ರಾಮಚಂದ್ರ ಭಟ್ , ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಕಾಚಿಲ ಮರಕಡ, ಮಾಯಿಲಪ್ಪ ಗೌಡ ಎಣ್ಮೂರು, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಶ್ರೀಮತಿ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟಿ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ,ಪರಮೇಶ್ವರ ಬಿಳಿಮಲೆ ಉದಯ ಕುಮಾರ್ ಬೆಟ್ಟ, ಸೀಮೆಯ ಸಾವಿರಾರು ಭಕ್ತಾದಿಗಳು, ಅರ್ಚಕರು,ದೇವಳ ಸಿಬ್ಬಂದಿಗಳು ಉಪಸ್ಥಿತರಿದ್ದರು.