ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಆರಂಭಗೊಂಡಿದ್ದು ಇಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ದೇಗುಲದಲ್ಲಿ ಶ್ರೀ ಗಣಪತಿ ಹವನ ,ಶ್ರೀ ರುದ್ರ ಹವನ ನಡೆಯಿತು. ಗರಡಿ ಬೈಲ್ ಮೂಲ ನಾಗನ ಕಟ್ಟೆಯಲ್ಲಿ ಆಶ್ಲೇಷ ಬಲಿ ಪೂಜೆ ಮತ್ತು ನಾಗ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ
ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸಲಹಾ ಸಮಿತಿ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಸಂಜೆ 6ಕ್ಕೆ ಕ್ಷೇತ್ರ ತಂತ್ರಿಗಳ ಆಗಮನ ಸಂಜೆ 7 ರಿಂದ ಧ್ವಜಾರೋಹಣ
ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ

ಸಂಜೆ 6-00ರಿಂದ 7-00ರ ವರೆಗೆ ‘ನೃತ್ಯಾರ್ಪಣ’ ವಿದುಷಿ ಮಾನಸ ಪುನೀತ್ ರೈ ನಿರ್ದೇಶನದಲ್ಲಿ ವಿಶ್ವಮೋಹನ ನೃತ್ಯ ಕಲಾ ಶಾಲೆ ಕಡಬ ಇವರಿಂದ.ಸಂಜೆ 7-30ರಿಂದ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜೀವನ್ ಬೆಳ್ಳಾರೆ ನಿರ್ದೇಶನದಲ್ಲಿ
‘ನೃತ್ಯ ಸಂಭ್ರಮ’ಡ್ಯಾನ್ಸ್ ಆಂಡ್ ಬೀಟ್ಸ್ ಪಂಜ, ಬೆಳ್ಳಾರೆ, ಕೈಕಂಬ ಹಾಗೂ ಸುಬ್ರಹ್ಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ. ಧ್ವಜಾರೋಹಣದ ಬಳಿಕ ರಥಬೀದಿಯಲ್ಲಿ ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ತು ಮಂಗಳೂರು ಇವರಿಂದ ‘ಯಕ್ಷಗಾನ ಬಯಲಾಟ –
ಪ್ರಸಂಗ-ರಂಗಪ್ರವೇಶ ನಡೆಯಲಿದೆ.