ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಕದಿರು ಗದ್ದೆಯಿಂದ ಕದಿರು ತೆಗೆಯುವ ಕಾರ್ಯಕ್ರಮ ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ

ಸದಸ್ಯರಾದ ಮಾಯಿಲಪ್ಪ ಗೌಡ ಎಣ್ಮೂರು, ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಸ್ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ, ಮಡಪ್ಪಾಡಿ ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು. ನಾಳೆ (ಸೆ.14)ಗಣೇಶ ಚತುರ್ಥಿಯ ದಿನದಂದು ಬೆಳಿಗ್ಗೆ ದೇವಳದಲ್ಲಿ ಪೂಜೆಯ ನಂತರ ಭಕ್ತರಿಗೆ ಕದಿರು ವಿತರಣೆ ಮತ್ತು ಸಾಮೂಹಿಕ ಅಪ್ಪ ಕಜ್ಜಾಯ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.











