ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯಕ್ರಮ ಜೂ.20 ರಂದು ನಡೆಯಿತು.ಜೆಸಿಐ ಪಂಜ ಪಂಚಶ್ರೀ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಸಹಕಾರದಲ್ಲಿ ನಡೆದ ನೇಜಿ ನಾಟಿ ಹಾಗು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ
ಬೇಸಾಯದ ಪಾಠ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಉದ್ಘಾಟಿಸಿ ಶುಭ ಹಾರೈಸಿದರು.ಪಂಜ ಪಂಚಶ್ರೀ ಜೇಸಿ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ ಅಧ್ಯಕ್ಷತೆ ವಹಿಸಿದ್ದರು. ಪರಿವಾರ ಪಂಜ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಪಂಜ ರೈತ ಸಂಪರ್ಕ ಕೇಂದ್ರದ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಸ್ಮಿತಾ ಹೆಚ್.ಎನ್. ಮಾಹಿತಿ

ನೀಡಿದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಬಿ.ಕೆ.ಮಾಧವ, ನಾಗತೀರ್ಥ ಶಾಲೆಯ ಮುಖ್ಯ ಶಿಕ್ಷಕಿ ಸರೋಜಿನಿ,ಕಾರ್ಯಕ್ರಮ ನಿರ್ದೇಶಕ ಮದನ್ ಕೊಲ್ಯ, ಪಂಜ ಪಂಚಶ್ರೀ ಜೇಸಿಯ ಮಾಜಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ಉಪಸ್ಥಿತರಿದ್ದರು. ಬಾಳಿಲ, ಪಂಜ, ನಾಗತೀರ್ಥ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಭಾಗವಹಿಸಿ ಬೇಸಾಯದ ಪಾಠ ಕಲಿತರು.ವಿದ್ಯಾರ್ಥಿಗಳು ನೇಜಿ ನೆಡುವ ಕಾರ್ಯದಲ್ಲಿ ಭಾಗವಹಿಸಿದ್ದರು.ಪಂಜ ಪಂಚಶ್ರೀ ಜೇಸಿ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ ಸ್ವಾಗತಿಸಿ, ಕಾರ್ಯದರ್ಶಿ ಪ್ರಕಾಶ್ ಅಳ್ಪೆ ವಂದಿಸಿದರು.








