ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.2 ರಂದು ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಿತು. ಬೆಳಿಗ್ಗೆ 8 ರಿಂದ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತರುದ್ರಾಭಿಷೇಕ, ಕಲಶಾಭಿಷೇಕ, ಪರಿವಾರ ದೈವಗಳಿಗೆ ಹಾಗೂ

ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ,ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಪಾಲ ಗೌಡ ಮರಕ್ಕಡ, ಪವಿತ್ರಾ ಮಲ್ಲೆಟ್ಟಿ ಹಾಗೂ ಭಕ್ತರು ಉಪಸ್ಥಿತರಿದ್ದರು.












