ಸುಳ್ಯ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಲಿದೆ. ಪೂರ್ವಹ್ನ 8 ರಿಂದ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ತಂಬಿಲ ಸೇವೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.