ಪಂಜ: ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಫೆ.2ರಂದು ಬೆಳಿಗ್ಗೆ 10ರಿಂದ ರುದ್ರ ಹವನ ನೆವೇರಿತು. ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ನಡೆಯಿತು.ದೇವಸ್ಥಾನದ

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಸಂಜೆ 6ಕ್ಕೆ ಶ್ರೀ ರಕ್ತೇಶ್ವರಿ ದೈವದ ಸನ್ನಿಧಿಯಲ್ಲಿ ತಂಬಿಲ ಸೇವೆ ಹಾಗೂ ಭಂಡಾರ ತೆಗೆಯುವುದು.ರಾತ್ರಿ 7-30ಕ್ಕೆ ದೇಗುಲದಲ್ಲಿ ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ. ರಾತ್ರಿ 8ರಿಂದ ಶ್ರೀ ರಕ್ತೇಶ್ವರಿ ದೈವದ ನೇಮ ನಡೆಯಲಿದೆ.





