ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆಯು ಡಿ.3 ರಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ಜರುಗಿತು. ಜಾತ್ರೋತ್ಸವದ ಸಿದ್ಧತೆಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.
ಜಾತ್ರೋತ್ಸವಕ್ಕೆ
ವಿವಿಧ ಸಮಿತಿಗಳನ್ನು ರಚಿಸಿ ಸಂಚಾಲಕರನ್ನು ನೇಮಕ ಮಾಡಲಾಯಿತು. ಬೈಲುವಾರು ಸಮಿತಿಗಳನ್ನು ರಚಿಸಲಾಯಿತು. ದೇವಸ್ಥಾನದ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ
ಸತ್ಯನಾರಾಯಣ ಕಾಯಂಬಾಡಿ . ಧರ್ಮಪಾಲ ಗೌಡ ಮರಕಡ ಕಾಚಿಲ, ಸಂತೋಷ್ ರೈ ಬಳ್ಪ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಶ್ರೀಮತಿ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಸ್ವಾಗತಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಧರ್ಮಣ್ಣ ನಾಯ್ಕ ಗರಡಿ ವಂದಿಸಿದರು.
ವ್ಯವಸ್ಥಾಪನಾ ಸಮಿತಿ ಪೂರ್ವಾಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲು ಗುತ್ತು , ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು ,ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.
.