ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಖರ್ಚು ವೆಚ್ಚಗಳ ಬಗ್ಗೆ ಸಾರ್ವಜನಿಕ ಸಭೆ ಮಾ.23 ರಂದು ಪಾರ್ವತಿ ಸಭಾಭವನದಲ್ಲಿ ನಡೆಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್
ಸಭೆಯ ಅಧ್ಯಕ್ಷತೆ ವಹಿಸಿದ್ದರು.ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿ, ಲೆಕ್ಕ ಪತ್ರ ಮಂಡಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ
ಸದಸ್ಯ ಧರ್ಮಣ್ಣ ನಾಯ್ಕ ಗರಡಿ ವಂದಿಸಿದರು.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಬಲಡ್ಕ,ಪಂಜ ದೇವಸ್ಥಾನದ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಪರಮೇಶ್ವರ ಬಿಳಿಮಲೆ ,ಪೈಂದೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಪಂಜ ದೇವಳದ ವ್ಯವಸ್ಥಾಪನಾ ಸಮಿತಿಯ

ಸದಸ್ಯರಾದ ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಎಣ್ಮೂರು, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ, ವಿವಿಧ ಸಮಿತಿಗಳ ಸಂಚಾಲಕರುಗಳು ಅರ್ಚಕರು ಮತ್ತು ಸಿಬ್ಬಂದಿ ವರ್ಗ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.














