ಪಂಜ:ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಒಳಾಂಗಣಕ್ಕೆ ಹಂಚಿನ ಶಾಶ್ವತ ಮಾಡು ಮಾಡುವ ಬಗ್ಗೆ ಊರ ಭಕ್ತಾದಿಗಳ ಸಭೆ ದೇವಸ್ಥಾನದಲ್ಲಿ ನಡೆಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದೇಗುಲದ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಶ್ರೀಕಾಚು ಕುಜುoಬ ದೈವಸ್ಥಾನದ
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪರಮೇಶ್ವರ ಗೌಡ ಬಿಳಿಮಲೆ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಧರ್ಮಪಾಲಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಲ್ಪ, ಧರ್ಮಣ್ಣ ನಾಯ್ಕ ಗರಡಿ ಉಪಸ್ಥಿತರಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಪಂಜ ಪರಿಸರದ ಸಾರ್ವಜನಿಕ ಆರಾಧನಾ ಸಮಿತಿ ಅಧ್ಯಕ್ಷರಾದ ಸವಿತಾರ ಮುಡೂರು, ಶ್ರೀ ಪೈಂದೋಡಿ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಗೌಡ ಕುದ್ವ, ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಶ್ವನಾಥ ಜಾಕೆ, ಗಂಗಾಧರ ಗೌಡ ಗುಂಡಡ್ಕಹಾಗೂ ಧರ್ಮಪಾಲ ನಡ್ಕ, ಆರಾಧನಾ ಸಮಿತಿಯ ಮಾಜಿ ಅಧ್ಯಕ್ಷ ಚಿನ್ನಪ್ಪ ಗೌಡ ಸಂಕಡ್ಕ, ಕಾಚುಕುಜುಂಬ ದೈವಸ್ಥಾನದ ಚೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ ಆನಂದ ಗೌಡ ಜಳಕದ ಹೊಳೆ , ಪರಮೇಶ್ವರ ಗೌಡ ಗೋಲ್ಯಾಡಿ ಪಂಬೆತ್ತಾಡಿ, ಇವರುಗಳು ಸಲಹೆ ಸೂಚನೆಗಳನ್ನು ನೀಡಿದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರು ಸ್ವಾಗತಿಸಿ, ವಂದಿಸಿದರು















