ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತಿದೆ.ರಾತ್ರಿ ಗಂಟೆ 8 ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯುತಿದೆ.ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ
ಭಜನಾ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ತಂಡ ನಾಗತೀರ್ಥ, ಶಿವಳ್ಳಿ ಸಂಪದ ಪಂಜ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ನಾಗತೀರ್ಥ, ಶ್ರೀ ಧರ್ಮಶಾಸ್ತಾವು ಭಜನಾ ಮಂಡಳಿ ಬಳ್ಪ ಭಜನಾ ತಂಡಗಳು ಭಜನೆ ಪ್ರಸ್ತುತ ಪಡಿಸಿದರು.

ಮಧ್ಯಾಹ್ನ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ ನಡೆಯಿತು ರಾತ್ರಿ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ , ರಾತ್ರಿ 8 ರಿಂದ ಶ್ರೀ ದೇವರಿಗೆ ಏಕಾದಶರುದ್ರಾಭಿಷೇಕ,ಬಿಲ್ವಾರ್ಚನೆ, ರುದ್ರ ಪಾರಾಯಣ. ರಾತ್ರಿ ಗಂಟೆ 10ಕ್ಕೆ ಮಹಾಪೂಜೆ ನಡೆಯಲಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತರು ಉಪಸ್ಥಿತರಿದ್ದರು.