ಪಂಜ:ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ.1 ರಂದು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಿತು.
ಬೆಳಿಗ್ಗೆ ದೇವಳದಲ್ಲಿ

12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತರುದ್ರಾಭಿಷೇಕ, ಕಲಶಾಭಿಷೇಕ ಹಾಗೂ ತಂಬಿಲ ಸೇವೆಗಳು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.





