ಪಂಜ: ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ವನಮಹೋತ್ಸವ ಆಚರಿಸಲಾಯಿತು. ಪಂಜ ವಲಯ ಅರಣ್ಯಾಧಿಕಾರಿ ಸಂಧ್ಯಾ ಗಿಡ ನೆಡುವ ಮೂಲಕ ಉದ್ಘಾಟಿಸಿದರು ಯುವಜನ ಸಂಯುಕ್ತ ಮಂಡಳಿಯ
ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಪಂಚಶ್ರೀ ಪಂಜ ಸ್ಪೋರ್ಟ್ಸ್ ಅಧ್ಯಕ್ಷ ಹಿತೇಶ್ ಪಂಜದಬೈಲು , ಉಪ ವಲಯ ಅರಣ್ಯ ಅಧಿಕಾರಿ ಪ್ರಕಾಶ್ ಅಗಸಿಮನಿ ,ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿ ಪ್ರಸಾದ ಚಿಕ್ಮುಳಿ, ದಿನೇಶ್ ಹಾಲೆಮಜಲು,ಜನಾರ್ಧನ ನಾಗತೀರ್ಥ,ಸಂತೋಷ್ ರೈ ಪಲ್ಲತ್ತಡ್ಕ ಉಪಸ್ಥಿತರಿದ್ದರು. ಶಶಿ ದಾಸ್ ಸ್ವಾಗತಿಸಿ, ಹೇಮಂತ್ ರೈ ವಂದಿಸಿದರು. ವಿಜೇಶ್ ಹಿರಿಯಡ್ಕ ನಿರೂಪಿಸಿದರು. ದೇವಸ್ಥಾನದ ವಠಾರದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು.








