ಸುಳ್ಯ: ವಿಶ್ವ ಹಿಂದೂ ಪರಿಷದ್ ಭಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ, ಸುಳ್ಯ ನಗರದ ವತಿಯಿಂದ ಆಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆ ಆ.14 ರಂದು ಸುಳ್ಯದಲ್ಲಿ ನಡೆಯಿತು. ಶಾಸ್ತ್ರಿ ವೃತ್ತದಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ತನಕ
ಪಂಜಿನ ಮೆರವಣಿಗೆ ನಡೆಯಿತು. ಶಾಸ್ತ್ರಿ ವೃತ್ತದ ಬಳಿಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಳ್ಳ ದಿಕ್ಸೂಚಿ ಭಾಷಣ ಮಾಡಿದರು. ಬಿಎಸ್ಎಫ್ ನಿವೃತ್ತ ಎನ್.ಬಿ.ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡ ಅಧ್ಯಕ್ಷ ಸೋಮಶೇಖರ ಪೈಕ ಅಧ್ಯಕ್ಚತೆ ವಹಿಸಿದ್ದರು. ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ಉಪೇಂದ್ರ ಕಾಮತ್, ವರ್ಷಿತ್ ಚೊಕ್ಕಾಡಿ, ರೂಪೇಶ್ ಪೂಜಾರಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.