ಸುಳ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಸುಳ್ಯ ನಗರ ಹಾಗೂ ಸುಳ್ಯ ಪ್ರಖಂಡದ ನೇತೃತ್ವದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯನ್ನು ಆ.14ರಂದು ಆಚರಿಸಲಾಯಿತು. ಇದರ ಅಂಗವಾಗಿ ಸುಳ್ಯ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯದ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ

ಮೆರವಣಿಗೆ ಮುಖ್ಯ ರಸ್ತೆಯಾಗಿ ಗಾಂಧಿನಗರ ತನಕ ತೆರಳಿ ಬಳಿಕ ಹಿಂತಿರುಗಿ ಚೆನ್ನಕೇಶವ ದೇವಸ್ಥಾನದ ಸಮೀಪ ಸಮಾಪನಗೊಂಡಿತು. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್, ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ ಹಾಗೂ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ಪಂಜಿನೊಂದಿಗೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಬಳಿಕ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ಸಭಾ ಕಾರ್ಯಕ್ರಮ ನಡೆಯಿತು.





